ದುಬೈ : ಹಲವಾರು ವರ್ಷಗಳಿಂದ ಯು.ಎ.ಇ ಯಾದ್ಯಂತ ಸಾಮಾಜಿಕ ರಂಗದಲ್ಲಿ ಸೇವೆಗೈಯುತ್ತಿರುವ ಅನಿವಾಸಿ ಕನ್ನಡಿಗರ ಒಕ್ಕೂಟ ಯು. ಎ. ಇ. ಇದರ ವತಿಯಿಂದ ಮರುಭೂಮಿ ಮಣ್ಣಿನ ಲತೀಫಾ ಆಸ್ಪತ್ರೆ ದುಬೈಯಲ್ಲಿ,ಆಯೋಜಿಸಿದ ಬೃಹತ್ ರಕ್ತದಾನ ಶಿಬಿರವು ಬಹಳ ಅಚ್ಚುಕಟ್ಟಾಗಿ ನೆರವೇರಿತು.
ಕಾರ್ಯಕ್ರಮದ ನೇತೃತ್ವ ವಹಿಸಿದ ಅನಿವಾಸಿ ಕನ್ನಡಿಗರ ಒಕ್ಕೂಟ ಯು. ಎ. ಇ. ಇದರ ಶಾಫಿ ಬಜ್ಪೆ ಯವರು ಪ್ರಾಸ್ತವಿಕವಾಗಿ ಮಾತನಾಡಿ, ಪ್ರತಿಯೊಬ್ಬ ರಕ್ತದಾನಿ ಇನ್ನೊಬ್ಬರ ಜೀವ ರಕ್ಷಕರಾಗಿರುತ್ತಾರೆ. ಪ್ರತಿಯೊಬ್ಬರೂ ರಕ್ತದಾನ ನೀಡುವ ಮೂಲಕ ಮಾನವೀಯತೆಯ ಮನೋಭಾವನೆಗಳನ್ನು ಬೆಳೆಸಬೇಕು, ಎಂಬ ಸಂದೇಶದೊಂದಿಗೆ, ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಶಿಬಿರದಲ್ಲಿ ಬರೋಬ್ಬರಿ ಒಟ್ಟು 105 ಜೀವದಾನಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ದಾಖಲೆ ನಿರ್ಮಿಸಿದ್ದರು.
ಜಾತಿ ಮತ ಪಂಗಡಗಳನ್ನು ಮರೆತು ,ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭವ್ಯ ಭಾರತದ ವಿವಿಧ ಭಾಗಗಳಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಅನಿವಾಸಿ ಕನ್ನಡಿಗರ ಒಕ್ಕೂಟ.ಯು ಎ ಇ ಇದರ ಕಾರ್ಯಕ್ರಮಕ್ಕೆ ಪ್ರೀತಿಯಿಟ್ಟು ಕ್ಲಪ್ತ ಸಮಯಕ್ಕೆ ಬಂದು ರಕ್ತದಾನ ಮಾಡಿ ಜೀವದಾನಿಗಳಾದರು.
ಈ ಅಚ್ಚುಕಟ್ಟಾದ ಯಶಸ್ವಿ ರಕ್ತದಾನ ಶಿಬಿರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಲತೀಫಾ ಆಸ್ಪತ್ರೆಯ ಆಡಳಿತ ಮಂಡಳಿಯವರು ಅನಿವಾಸಿ ಕನ್ನಡಿಗರ ಒಕ್ಕೂಟ ಇದರ ಕಾರ್ಯ ವೈಖರಿಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.
ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ಎಲ್ಲರಿಗೂ ಅನಿವಾಸಿ ಕನ್ನಡಿಗರ ಒಕ್ಕೂಟ ಯು. ಎ. ಇ. ಇದರ ಅಧ್ಯಕ್ಷರಾಗಿರುವ ಜನಾಬ್ ಶಂಸುದ್ದೀನ್ ಉಡುಪಿಯವರು ಅಭಿನಂದನಾ ಪತ್ರ ನೀಡಿ ಗೌರವಿಸಿದರು.
ಅನಿವಾಸಿ ಕನ್ನಡಿಗರ ಒಕ್ಕೂಟ. ಯು.ಎ.ಇ